ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ,
Uppinangadi Student Suiced,
1. ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ,
ಕಾಲೇಜು ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.