ಉಳ್ಳಾಲ: ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಹರಕೆಯ ಕೋಲ ನೀಡಿದ `ಕೊರಗಜ್ಜ' ಚಿತ್ರ ತಂಡ,

Ullala Koragajjas Adisthala, Harake Kola,

ಉಳ್ಳಾಲ: ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಹರಕೆಯ ಕೋಲ ನೀಡಿದ `ಕೊರಗಜ್ಜ' ಚಿತ್ರ ತಂಡ,
1 / 1

1. ಉಳ್ಳಾಲ: ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಹರಕೆಯ ಕೋಲ ನೀಡಿದ `ಕೊರಗಜ್ಜ' ಚಿತ್ರ ತಂಡ,

ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳ ಕ್ಷೇತ್ರಕ್ಕೆ `ಕೊರಗಜ್ಜ ' ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ ಆಶೀರ್ವಾದ ಮತ್ತು ಪವಾಡದಿಂದ ಇದು ಸಾಧ್ಯವಾಗಿದೆ, ಕೊರಗಜ್ಜ ಚಿತ್ರದಲ್ಲಿ ಪಂಜಂದಾಯ ಪಾತ್ರ ನಿರ್ವಹಿಸಿರುವೆ . ಅದ್ಭುತ ಕಲಾವಿದರುಗಳನ್ನು ಒಳಗೊಂಡ ಯಶಸ್ಸಿನ ಚಿತ್ರವಾಗಿ ಹೊರಹೊಮ್ಮಲಿದೆ. ಚಿತ್ರದ ಪ್ರತಿ ಕೆಲಸಕಾರ್ಯಗಳು ಪವಾಡ ರೀತಿಯಲ್ಲಿ ಕೊರಗಜ್ಜನ ದಯೆಯಿಂದ ನಡೆದುಬಂದಿದೆ ಎಂದರು.ನಟಿ ಶೃತಿ ಮಾತನಾಡಿ , ಹಣ ಇದ್ದವರು ಸಿನೆಮಾ ಮಾಡಲು ಸಾಧ್ಯವಿಲ್ಲ. ದೇವರ ಅನುಗ್ರಹದಿಂದಷ್ಟೇ ಕೊರಗಜ್ಜ ಸಿನಿಮಾ ಮಾಡಿರುವುದು ಅನುಭವದಿಂದ ಕಂಡುಬಂದ ಸತ್ಯ.2023 ರಲ್ಲಿ ತುಂಬಾ ನಿರೀಕ್ಷೆಯಲ್ಲಿರುವ ಸಿನೆಮಾಗಳಲ್ಲಿ ಕೊರಗಜ್ಜನ ಚಿತ್ರ ವೂ ಸೇರಿದೆ ಎಂದರು.