ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ,
Ayodhya Shreeram Mandir Vigrah Prathishtapan,
1. ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ,
ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಸದಸ್ಯರು ತಿಳಿಸಿರುವುದಾಗಿ ವರದಿಯಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಈ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿದ್ದು,ರಾತ್ರಿ ವಿಶೇಷ ಪೂಜೆಯೊಂದಿಗೆ ರಾಮಲಲ್ಲಾನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆ ತರಲಾಯಿತು.ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ಕಲಶ ಪೂಜೆ ಇಂದು ನಡೆದಿದೆ.