ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ,

Bangalore,Hubballi,

ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ,
1 / 1

1. ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ,

ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರ ಮೂಗಜ್ಜನ ಕೋಳಿ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು ನವೀನ್ ಡಿ ಪಡೀಲ್ ಇವರು ನಿರ್ವಹಿಸಿದ್ದಾರೆ. ಇಡೀ ಸಿನಿಮಾದಲ್ಲಿ ಒಂದೇ ಒಂದು ಮಾತಿಲ್ಲದ, ಕೋಳಿಗಳನ್ನು ಪ್ರೀತಿಸುವ ಒರಟು ಮುದುಕನ ಪಾತ್ರವನ್ನುಇವರು ಮನೋಜ್ಞವಾಗಿ ನಿಭಾಯಿಸಿದ್ದಾರೆ.“ನಮ್ಮಕನಸು ಪ್ರೊಡಕ್ಷನ್ಸ್‌” ಎಂಬ ಬ್ಯಾನರಿನಡಿಯಲ್ಲಿ ಶ್ರೀ ಕೆ.ಸುರೇಶ್‌. ಇವರು ನಿರ್ಮಿಸಿರುವ ಚೊಚ್ಚಲ ಚಿತ್ರವೇ ಮೂಗಜ್ಜನ ಕೋಳಿ.