ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ನಿರ್ಣಯ,

Manglore Karnataka,

ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ನಿರ್ಣಯ,
1 / 1

1. ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ನಿರ್ಣಯ,

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 100ಕ್ಕೂ ಹೆಚ್ಚು ಮುಜರಾಯಿಯೇತರ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಲು ದೇವಾಲಯಗಳ ವಿಶ್ವಸ್ಥರು ಒಪ್ಪಿದ್ದಾರೆ. ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ‌ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ. ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾ ಸಂಘದ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ದೈವ, ದೇವಾಲಯಗಳ ಪಾವಿತ್ರತೆ, ವಸ್ತ್ರ ಸಂಹಿತೆ, ದೇವಾಲಯಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವ ಕುರಿತು ಚರ್ಚಿಸಲಾಯಿತು. ಪ್ರತಿ ದೇವಾಲಯಗಳಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವುದು. ಧಾರ್ಮಿಕ ಪಾಠದ ಮೂರು ತಿಂಗಳ ಕೋರ್ಸ್​​ನ್ನು ಹಿಂದೂ ಜನಜಾಗೃತಿ ಸಮಿತಿ ಸಿದ್ದ ಪಡಿಸಿದೆ. ಈ ಕೋರ್ಸ್​ನಲ್ಲಿ ಹಿಂದೂ‌ ಧರ್ಮ, ದೇವರುಗಳ, ಆಚಾರ ವಿಚಾರ, ಸಂಸ್ಕೃತಿ, ಪದ್ದತಿ, ಪರಂಪರೆಗಳ ಬಗ್ಗೆ ಮಕ್ಕಳಿಗೆ ಪಾಠ ಮಾಡಲಾಗುತ್ತದೆ. ಇನ್ನು ವಾರಕ್ಕೆ ಒಂದು ದಿನ ಪ್ರತಿ ದೇವಾಲಯಗಳಲ್ಲಿ ಧಾರ್ಮಿಕ ಪಾಠ ನಡೆಸಬೇಕು. ದೇವಾಲಯಗಳ ಮೂಲಕ ಹಿಂದೂ ಧರ್ಮದ ಬಗ್ಗೆ ಪ್ರಚಾರ ಮಾಡಲು ನಿರ್ಣಯಿಸಲಾಯಿತು.ದೇವಸ್ಥಾನಗಳ ಜಾತ್ರೆ, ಉತ್ಸವ ಇತ್ಯಾದಿ ಸಂದರ್ಭಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ನೀಡಬಾರದು. ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳಿಂದ ಸಂಗ್ರಹವಾಗುವ ಕಾಮನ್ ಪೂಲ್ ನಿಧಿಯನ್ನು ಹಿಂದೂ ಧಾರ್ಮಿಕ ಉದ್ದೇಶಕ್ಕೆ ಮಾತ್ರ ಬಳಸಬೇಕು. ರಾಜ್ಯದ ಅನೇಕ ದೇವಸ್ಥಾನಗಳು ಸರ್ಕಾರದ ನಿಯಂತ್ರಣದಲ್ಲಿದ್ದು, ಅವನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಬೇಕು. ಎಂಬ ಪ್ರಮುಖ ನಿರ್ಣಯಗಳಗಳನ್ನು ಸಭೆಯಲ್ಲಿ ಸ್ವೀಕರಿಸಿದರು.