ಬಹುಭಾಷಾ ಖ್ಯಾತ ಗಾಯಕ ಪಂಕಜ್ ಉದಾಸ್ ನಿಧನ,

Famous Singer Pankaj Udas Death,

ಬಹುಭಾಷಾ ಖ್ಯಾತ ಗಾಯಕ ಪಂಕಜ್ ಉದಾಸ್ ನಿಧನ..!
1 / 1

1. ಬಹುಭಾಷಾ ಖ್ಯಾತ ಗಾಯಕ ಪಂಕಜ್ ಉದಾಸ್ ನಿಧನ..!

ನವದೆಹಲಿ: ಪದ್ಮಶ್ರೀ ಪುರಸೃತ ಜನಪ್ರಿಯ ಘಜಲ್ ಮತ್ತು ಹಿನ್ನೆಲೆ ಗಾಯಕ ಪಂಕಜ್ ಉಧಾಸ್ ಅವರು ತೀವ್ರ ಅನಾರೋಗ್ಯದಿಂದಾಗಿ ನಿಧನ ಹೊಂದಿದ್ದಾರೆ. ಇದೀಗ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. ಪಂಕಜ್ ಉದಾಸ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರು ಬಾಲಿವುಡ್ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕನ್ನಡದ ಸುದೀಪ್ ನಟನೆಯ ಸ್ಪರ್ಶ ಸಿನಿಮಾದ ‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಹಾಡನ್ನು ಹಾಡಿದ್ದಾರೆ. ಪಂಕಜ್ ಉದಾಸ್ ನಿಧನಕ್ಕೆ ಬಾಲಿವುಡ್, ಗಝಲ್ ಪ್ರೇಮಿಗಳ ಕಂಬನಿ ಮಿಡಿದಿದ್ದಾರೆ.