ಬೀದರ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

modi, beeder

1.

ಬೀದರ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.03) ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ ಗೆ ತೆರಳಲಿದ್ದಾರೆ. ಹಾಗೇ ಸಂಜೆ 5:55ಕ್ಕೆ ನಿಜಾಮಾಬಾದ್ ನಿಂದ ವಾಪಸ್​ ಬೀದರ್ ಏರ್ ಬೇಸ್​ಗೆ ಬಂದು 6 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.