ಬೆಂಗಳೂರು ;ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ,

Banglore Garlic's Price Have Been Increased,

ಬೆಂಗಳೂರು ;ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ,
1 / 1

1. ಬೆಂಗಳೂರು ;ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ,

ದೇಶದಲ್ಲಿ ಬೆಳ್ಳುಳ್ಳಿ ಬೆಲೆಯಲ್ಲಿ ಕ್ಷಿಪ್ರ ಏರಿಕೆ ಕಂಡಿದ್ದು, ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. ಕರ್ನಾಟಕದಿಂದ ಹಿಡಿದು ದೆಹಲಿಯವರೆಗೂ, ಕೋಲ್ಕತ್ತಾದಿಂದ ಹಿಡಿದು ಅಹಮದಾಬಾದ್‌ವರೆಗೂ ಒಂದು ಕೆಜಿ ಬೆಳ್ಳುಳ್ಳಿ ಬೆಲೆ 500 ರೂ. ದಾಟಿದೆ. ಒಂದು ತಿಂಗಳ ಹಿಂದೆ ಚಿಲ್ಲರೆ ಬೆಲೆ ಕೆಜಿಗೆ 200 ರಿಂದ 250 ರೂಪಾಯಿ ಇತ್ತು. ಈ ವರ್ಷ ಬೆಳ್ಳುಳ್ಳಿ ಬೆಳೆ ಕೈಕೊಟ್ಟಿದ್ದರಿಂದ ಏಕಾಏಕಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ಇದರಲ್ಲೂ ಬೆಳ್ಳುಳ್ಳಿ ಬೆಲೆ ಏರಿಕೆಗೆ ಎರಡು ಕಾರಣಗಳಿವೆ. ಮೊದಲನೆಯದು- ಹವಾಮಾನ ವೈಪರೀತ್ಯದಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದೆ. ಎರಡನೆಯ ಕಾರಣ ಕಡಿಮೆ ಉತ್ಪಾದನೆಯಿಂದಾಗಿ, ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿಯ ಪೂರೈಕೆಯಲ್ಲಿ ಭಾರಿ ಕಡಿತ ಕಂಡುಬಂದಿದೆ. ನಾಸಿಕ್ ಮತ್ತು ಪುಣೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ಉತ್ಪಾದಿಸಲಾಗುತ್ತದೆ. ಹೊಸ ಬೆಳೆ ಮಾರುಕಟ್ಟೆಗೆ ಬರಲು ಸಮಯ ಹಿಡಿಯಲಿದೆ. ಬೆಳ್ಳುಳ್ಳಿಯ ಕೊರತೆಯಿಂದಾಗಿ, ಕಳೆದ ಕೆಲವು ವಾರಗಳಲ್ಲಿ ಅದರ ಬೆಲೆ ಹೆಚ್ಚಾಗಿದೆ. ಈ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುವ ಸಾಧ್ಯತೆಯಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಬೆಳ್ಳುಳ್ಳಿ ಬೆಲೆ ಏರಿಕೆ ಗ್ರಾಹಕರ ಕೈ ಸುಡಲಿದೆ.