ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ

1.

ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ. ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ