ಹೈಸ್ಕೂಲ್‌, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ - ಸರ್ಕಾರ ಚಿಂತನೆ,

Banglore, government guided College students,

ಹೈಸ್ಕೂಲ್‌, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ - ಸರ್ಕಾರ ಚಿಂತನೆ,
1 / 1

1. ಹೈಸ್ಕೂಲ್‌, ಪಿಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ - ಸರ್ಕಾರ ಚಿಂತನೆ,

ಬಹುತೇಕ ವಿದ್ಯಾರ್ಥಿಗಳು ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಸಂದರ್ಭ ಗೊಂದಲಕ್ಕೆ ಒಳಗಾಗುತ್ತಾರೆ. ಆದರೆ ಇದೀಗ ಈ ಸಮಸ್ಯೆಗೆ ಪರಿಹಾರ ಕ್ರಮವಾಗಿ ರಾಜ್ಯದ ಸರಕಾರಿ ಹೈಸ್ಕೂಲ್‌ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೂ ವೃತ್ತಿ ಮಾರ್ಗದರ್ಶನ ಕೋಶ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ವಿದ್ಯಾರ್ಥಿಗಳಲ್ಲಿ ಗೊಂದಲ ತಪ್ಪಿಸಲು ವೃತ್ತಿ ಮಾರ್ಗದರ್ಶನ ಅಗತ್ಯ ಎಂದು ಸರ್ಕಾರ ತಿಳಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷ 2024-25ರಲ್ಲಿ ವೃತ್ತಿ ಮಾರ್ಗದರ್ಶನ ಕೋಶಗಳನ್ನು ಪ್ರಾರಂಭಿಸುವ ಬಗ್ಗೆ ಸಮಗ್ರ ಶಿಕ್ಷಣ ಕರ್ನಾಟಕ ಈಗಾಗಲೇ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ವಿಚಾರವಾಗಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿದು ಬಂದಿದೆ.ಕೋಶ ಯೋಜನೆಯು ಕೇವಲ ಪದವಿ, ಸ್ನಾತಕೋತ್ತರ, ವೃತ್ತಿಪರ ಕಾಲೇಜು, ವಿವಿಗಳಿಗೆ ಮಾತ್ರ ಸೀಮಿತವಾಗಿತ್ತು.ಈ ಯೋಜನೆಯು ಗ್ರಾಮೀಣ, ಬಡ ಮಕ್ಕಳಿಗೆ ಹೈಸ್ಕೂಲ್‌ ಮತ್ತು ಪಿಯು ಮಟ್ಟದಲ್ಲಿ ಸೂಕ್ತ ಮಾರ್ಗದರ್ಶನ ಸಿಕ್ಕಿದರೆ ಅವರು ವೃತ್ತಿ ಬದುಕಿನ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.