ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಇಬ್ಬರು ಅರೆಸ್ಟ್,

Ayodhya Raama mandira,Bomb Cases,

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಇಬ್ಬರು ಅರೆಸ್ಟ್,
1 / 1

1. ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಇಬ್ಬರು ಅರೆಸ್ಟ್,

ಅಯೋಧ್ಯೆಯ ರಾಮ ಮಂದಿರ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಾಂಬ್‌ ಹಾಕುವುದಾಗಿ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇಬ್ಬರನ್ನು ಯುಪಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಹದ್ ಸಿಂಗ್ ಮತ್ತು ಓಂಪ್ರಕಾಶ್ ಬಂಧಿತರು. ಆರೋಪಿಗಳಿಬ್ಬರೂ ಗೊಂಡಾ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಪೋಲೀಸರ ಪ್ರಕಾರ, ಈ ಇಮೇಲ್‌ಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಯ ಅಧಿಕಾರಿ ಎಂದು ಹೇಳಿಕೊಳ್ಳುವ ಜುಬೇರ್ ಖಾನ್ ಎಂಬ ವ್ಯಕ್ತಿಯಿಂದ ಆಯೋಜಿಸಲಾಗಿದೆ ಎಂದು ಹೇಳಲಾಗಿದೆ. ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.