ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ದಿನ 7 ಸಾವಿರ ಕೆಜಿ ರಾಮ ಹಲ್ವಾ ಸಿದ್ದವಾಗಲಿದೆ,

Ayodhya Seven Thousand kg Halwa Prepaired,

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ದಿನ 7 ಸಾವಿರ ಕೆಜಿ ರಾಮ ಹಲ್ವಾ ಸಿದ್ದವಾಗಲಿದೆ,
1 / 1

1. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ದಿನ 7 ಸಾವಿರ ಕೆಜಿ ರಾಮ ಹಲ್ವಾ ಸಿದ್ದವಾಗಲಿದೆ,

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಇಡೀ ದೇಶವೇ ಹಬ್ಬದ ಸಂಭ್ರಮದಲ್ಲಿದೆ. ಈ ಹಬ್ಬದ ಮೆರುಗನ್ನು ಹೆಚ್ಚಿಸಲು ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗರೊಬ್ಬರು ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ನಾಗ್ಪುರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಬಾಣಸಿಗ ವಿಷ್ಣು ಮನೋಹರ್‌ ಅವರು ರಾಮಮಂದಿರ ಲೋಕಾರ್ಪಣೆ ದಿನ ವಿಶೇಷ ‘ರಾಮ ಹಲ್ವಾ’ತಯಾರಿಸಲಿದ್ದಾರೆ. ಸುಮಾರು 7 ಸಾವಿರ ಕೆ.ಜಿ ರಾಮ ಹಲ್ವಾವಾಗಿದ್ದು,ಇದಕ್ಕಾಗಿ 12 ಸಾವಿರ ಲೀಟರ್‌ ನೀರಿನ ಸಾಮರ್ಥ್ಯದ ಬೃಹತ್‌ ಕಡಾಯಿಯೊಂದನ್ನು ಕೂಡ ತಯಾರಿಸಿದ್ದಾರೆ. “900 ಕೆಜಿ ರವೆ, 1 ಸಾವಿರ ಕೆಜಿ ತುಪ್ಪ, ಸಾವಿರ ಕೆಜಿ ಸಕ್ಕರೆ, 2 ಸಾವಿರ ಲೀಟರ್‌ ಹಾಲು, 2,500 ಲೀಟರ್‌ ನೀರು, 300 ಕೆಜಿ ಡ್ರೈ ಫ್ರೂಟ್ಸ್‌, 75 ಕೆಜಿ ಏಲಕ್ಕಿ ಪೌಡರ್‌ ಬಳಸಿಕೊಂಡು ವಿಶೇಷ ರಾಮ ಹಲ್ವಾ ತಯಾರಿಸಲಾಗುವುದು”ಎಂದು ವಿಷ್ಣು ಮನೋಹರ್‌ ತಿಳಿಸಿದ್ದಾರೆ.