ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಸಿಎಂ ಯೋಗಿ ಸರ್ಕಾರ ಮಹತ್ವದ ನಿರ್ಧಾರ,

Lakno,Ayodhya Rama mandir,

ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಸಿಎಂ ಯೋಗಿ ಸರ್ಕಾರ ಮಹತ್ವದ ನಿರ್ಧಾರ,
1 / 1

1. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಸಿಎಂ ಯೋಗಿ ಸರ್ಕಾರ ಮಹತ್ವದ ನಿರ್ಧಾರ,

ಅಯೋಧ್ಯೆಯಲ್ಲಿ ರಾಮಮಂದಿರ ಜ.22 ರಂದು ಉದ್ಘಾಟನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದು, ಅಯೋಧ್ಯೆಯನ್ನು ಮದುಮಗಳಂತೆ ಸಿಂಗರಿಸಲಾಗುತ್ತಿದೆ. ಈ ಮಧ್ಯೆ ರಾಮನ ಪ್ರಾಣ ಪ್ರತಿಷ್ಠೆಗೂ ಮುನ್ನ ಸಿಎಂ ಯೋಗಿ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಸಿಎಂ ಯೋಗಿ ಸರ್ಕಾರ ಘೋಷಣೆ ಮಾಡಿದೆ.ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಅಷ್ಟೇ ಅಲ್ಲದೇ ಈಗಾಗಲೇ ಇರುವ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಹಾಗೂ ಸುಲ್ತಾನ್‌ಪುರ ಪ್ರದೇಶಗಳು ಕೂಡ ಈ ವ್ಯಾಪ್ತಿಗೆ ಒಳಪಡುತ್ತದೆ. ಆದ್ದರಿಂದ ಈ ಪ್ರದೇಶಗಳಲ್ಲೂ ಮದ್ಯ ಮಾರಾಟ ನಿಷೇಧಿಸಲಾಗುತ್ತದೆ. ಹಾಗೂ ಅಲ್ಲಿರುವಂತಹ ಮದ್ಯದಂಗಡಿಗಳನ್ನು ಸ್ಥಳಾಂತರಿಸಲಾಗುತ್ತದೆ. ಮದ್ಯದಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ಬಳಿಕ ಈ ಮಾಹಿತಿ ಹಂಚಿಕೊಂಡಿದ್ದಾರೆ.