ಕಾಸರಗೋಡು: ಎಟಿಎಂ ಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ . ದರೋಡೆ,

Uppala ATM Filled Money 50 Lkh Brought,

ಕಾಸರಗೋಡು: ಎಟಿಎಂ ಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ . ದರೋಡೆ,
1 / 1

1. ಕಾಸರಗೋಡು: ಎಟಿಎಂ ಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ . ದರೋಡೆ,

ಎ ಟಿ ಎಂ ಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ನಿನ್ನೆ ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ. ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎ ಟಿ ಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ . ಪರಿಶೀಲಿಸಿದಾಗ ಸುಮಾರು 50 ಲಕ್ಷ ರೂ . ಗಳಿದ್ದ ಬಾಕ್ಸ್ ನಾಪತ್ತೆಯಾಗಿತ್ತು .ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎ ಟಿಎಂ ಗೆ ತುಂಬಿಸಲಾಗುತಿತ್ತು.ಈ ಸಂದರ್ಭದಲ್ಲಿ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿ ಸಿ ಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ .