ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಬಲಿವಾಡು ಕೂಟ, ಶತರುದ್ರಾಭಿಷೇಕ ಹಾಗೂ ರಂಗಪೂಜೆ ,

Uppala Kubanoor Temple Fest,

ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಬಲಿವಾಡು ಕೂಟ, ಶತರುದ್ರಾಭಿಷೇಕ ಹಾಗೂ ರಂಗಪೂಜೆ ,
1 / 1

1. ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಬಲಿವಾಡು ಕೂಟ, ಶತರುದ್ರಾಭಿಷೇಕ ಹಾಗೂ ರಂಗಪೂಜೆ ,

ಉಪ್ಪಳ: ಕುಬಣೂರು ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಬಲಿವಾಡು ಕೂಟ, ಶತರುದ್ರಾಭಿಷೇಕ ಹಾಗೂ ರಂಗಪೂಜೆ ಫೆ.10ರಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇದರ ಅಂಗವಾಗಿ ಫೆ.9ರಂದು ಬೆಳಿಗ್ಗೆ 9ಕ್ಕೆ ಗಣಹೋಮ, ಸಂಜೆ 4ರಿಂದ ರಾತ್ರಿ 8.30ರ ತನಕ ವಿವಿಧ ತಂಡಗಳಿಂದ ಭಜನೆ, 10ರಂದು ಬೆಳಿಗ್ಗೆ 8ರಿಂದ ಕಲಶ ಮತ್ತು ಶತರುದ್ರಾಭಿಷೇಕ, ಮಧ್ಯಾಹ್ನ 12ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3ರಿಂದ 7ರ ತನಕ ವಿವಿಧ ತಂಡಗಳಿಂದ ಭಜನೆ, ರಾತ್ರಿ 7ರಿಂದ 8.30ರ ತನಕ ಪ್ರಣೀತ್ ಬಳ್ಳಕ್ಕುರಾಯ ಮತ್ತು ಬಳಗ, ಕಾನ ಕುಬಣೂರು ಇವರಿಂದ ಸಂಗೀತ ಕಾರ್ಯಕ್ರಮ, ರಾತ್ರಿ 8.30ಕ್ಕೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 8.30ರಿಂದ ಯುವ ಬಳಗ ತಿಂಬರ ಇದರ 14ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವೇದಮೂರ್ತಿ ಶ್ರೀ ಹರಿನಾರಾಯಣ ಮಯ್ಯ ಕುಂಬಳೆ ದೀಪ ಪ್ರಜ್ವಲನೆಗೊಳಿಸುವರು. ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಅಶೋಕ್ ಕುಮಾರ್ ಹೊಳ್ಳ, ಮಂಗಲ್ಪಾಡಿ ಪಂಚಾಯತ್ ಸದಸ್ಯೆ ಸುಧಾ ಗಣೇಶ್ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಯಕ್ಷಗುರು ರಾಮ ಸಾಲಿಯಾನ್ ಮಂಗಲ್ಪಾಡಿ, ಪ್ರವೀಣ ಕುಮಾರ.ಕೆ ಆಚಾರ್ಯ ಪ್ರತಾಪನಗರ, ಡಾ.ಆಕರ್ಶ್ ಶೆಟ್ಟಿ ತಿಂಬರ ಇವರನ್ನು ಸನ್ಮಾನಿಸಲಾಗುವುದು. ರಾತ್ರಿ 9ರಿಂದ ಲಕುಮಿ ತಂಡದ ಕುಸಾಲ್ದ ಕಲಾವಿದೆರ ಅಭಿನಯದ ಮಗಲ್ ತುಳು ನಾಟಕ ಪ್ರದರ್ಶನಗೊಳ್ಳಲಿದೆ.