ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ,

Ayodhya Shreeram Mandir Vigrah Prathishtapan,

ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ,
1 / 1

1. ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ,

ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಸದಸ್ಯರು ತಿಳಿಸಿರುವುದಾಗಿ ವರದಿಯಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಈ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿದ್ದು,ರಾತ್ರಿ ವಿಶೇಷ ಪೂಜೆಯೊಂದಿಗೆ ರಾಮಲಲ್ಲಾನ ವಿಗ್ರಹವನ್ನು  ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆ ತರಲಾಯಿತು.ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ಕಲಶ ಪೂಜೆ ಇಂದು ನಡೆದಿದೆ.