ಚೀನಾದಲ್ಲಿ ಪ್ರಬಲ ಭೂಕಂಪ- ಕನಿಷ್ಠ 111 ಮಂದಿ ಮೃತ್ಯು, 200 ಕ್ಕೂ ಹೆಚ್ಚು ಮಂದಿಗೆ ಗಾಯ,

CHINA,EARTH QUAKE,

ಚೀನಾದಲ್ಲಿ ಪ್ರಬಲ ಭೂಕಂಪ- ಕನಿಷ್ಠ 111 ಮಂದಿ ಮೃತ್ಯು, 200 ಕ್ಕೂ ಹೆಚ್ಚು ಮಂದಿಗೆ ಗಾಯ,
1 / 1

1. ಚೀನಾದಲ್ಲಿ ಪ್ರಬಲ ಭೂಕಂಪ- ಕನಿಷ್ಠ 111 ಮಂದಿ ಮೃತ್ಯು, 200 ಕ್ಕೂ ಹೆಚ್ಚು ಮಂದಿಗೆ ಗಾಯ,

ಚೀನಾದ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ. 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು, ರಕ್ಷಣಾ ತಂಡದಿಂದ ಭರದ ಕಾರ್ಯಾ ಚರಣೆ ನಡೆಸುತ್ತಿದ್ದು ಇದುವರೆಗೂ ಸುಮಾರು ನೂರಕ್ಕೂ ಅಧಿಕ ಮಂದಿ ಸಾವನ್ನಪಿರುವ ಕುರಿತು ವರದಿಯಾಗಿದೆ.ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಲ್ಲಿ ಸಾಗುತ್ತಿದ್ದು ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.