ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ;

Deepavali,Crackers,Permited,

ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ;
1 / 1

1. ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ;

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿ ಪಟಾಕಿ ಸಿಡಿಸಲು ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.  ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮೇಲ್ಯಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಸಿರುತ್ತದೆ.