ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ,
Puttur College Student Suiced,
1. ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ,
ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದ ದೀಕ್ಷಾ ಅವರಿಗೆ ನಾಳೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಇನ್ನು ದೀಕ್ಷಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಈಶ್ವರಮಂಗಲ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.