ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗನ್ ಮೋಹನ್ ರೆಡ್ಡಿ,

Jagan Mohan Reddy Meeted Modiji,

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗನ್ ಮೋಹನ್ ರೆಡ್ಡಿ,
1 / 1

1. ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗನ್ ಮೋಹನ್ ರೆಡ್ಡಿ,

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ ಈ ಭೇಟಿಯ ಹಿಂದಿನ ಮರ್ಮವೇನು? ಭೇಟಿ ವೇಳೆ ಯಾವ್ಯಾವ ವಿಚಾರಗಳನ್ನು ಚರ್ಚಿಸಿದ್ದಾರೆ ಎಂದು ಮಾಹಿತಿ ಇಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ವೈಎಸ್ ಆರ್ ಸಿಪಿಯ ಹಿರಿಯ ನಾಯಕರು ಮತ್ತು ರಾಜ್ಯಸಭಾ ಸದಸ್ಯರಾದ ವಿ ವಿಜಯಸಾಯಿ ರೆಡ್ಡಿ ಮತ್ತು ಆರ್ ಕೃಷ್ಣಯ್ಯ, ತಿರುಪತಿ ಲೋಕಸಭಾ ಸಂಸದ ಎಂ ಗುರುಮೂರ್ತಿ ಮತ್ತಿತರರು ಉಪಸ್ಥಿತರಿದ್ದರು ಎನ್ನಲಾಗಿದೆ.