ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

bangalore, accident, die

1.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು  ಬೆಳ್ಳಂಬೆಳಗ್ಗೆ ಭಿಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. 

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ

ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.