ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕುದ್ರೋಳಿಯ ಯುವಕ ಮೃತ್ಯು

ಮಂಗಳೂರು, ಸೆ.14: ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕುದ್ರೋಳಿಯ ಯುವಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕುದ್ರೋಳಿಯ ಮೊಯ್ದಿನ್ ನಗರದ ಝಹೂರ್-ನಸೀರಾ ದಂಪತಿಯ ಪುತ್ರ ನಾಹಿದ್ ಸಫಾನ್ (28) ಮೃತಪಟ್ಟವರಾಗಿದ್ದಾರೆ. ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಗುರುವಾರ ಮುಂಜಾವ ಸುಮಾರು 2:20ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯಲಹಂಕದ ನೆಹರೂ ನಗರದಲ್ಲಿ ವಾಸವಾಗಿದ್ದ ಇವರು ತನ್ನ ಸ್ಕೂಟರ್‌ನಲ್ಲಿ ಯಲಹಂಕದಿಂದ ಬೆಂಗಳೂರು ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಯಲಹಂಕ ಬಿಬಿ ರಸ್ತೆಯ ಏರೋ ಡ್ರಂ ಬಳಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

1 / 1

1.