ಬೆಂಗಳೂರು ; ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ,

Bangalore, Famous Dairector ,Heart Attack,

ಬೆಂಗಳೂರು ; ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ,
1 / 1

1. ಬೆಂಗಳೂರು ; ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ,

ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್(57)ಹಠಾತ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಅವರಿಗೆ 57 ವರ್ಷ ವಯಸ್ಸಾಗಿತ್ತು. 1966ರಲ್ಲಿ ಕೇರಳದ ಅಲೆಪ್ಪೆಯಲ್ಲಿ ಹುಟ್ಟಿದ ಜಾಲಿ ಬೆಳೆದಿದ್ದು,ಶಿಕ್ಷಣ ಪಡೆದಿದ್ದು ಬೆಂಗಳೂರಿನಲ್ಲೇ. 17 ವರ್ಷದಲ್ಲಿ ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿ ಪ್ರೇಮಲೋಕ’ ‘ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಜಾಲಿ ಬಾಸ್ಟಿನ್ ಪಾತ್ರರಾಗಿದ್ದರು. ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.