ಮಂಗಳೂರು: 23 ಗಂಟೆಯಲ್ಲಿ ಮುಗಿದು ದಾಖಲೆ ನಿರ್ಮಿಸಿದ ವಾಮಂಜೂರು ಕಂಬಳ,

Manglore 23Hours Closed Vamanjoor Kambala,

ಮಂಗಳೂರು: 23 ಗಂಟೆಯಲ್ಲಿ ಮುಗಿದು ದಾಖಲೆ ನಿರ್ಮಿಸಿದ ವಾಮಂಜೂರು ಕಂಬಳ,
1 / 1

1. ಮಂಗಳೂರು: 23 ಗಂಟೆಯಲ್ಲಿ ಮುಗಿದು ದಾಖಲೆ ನಿರ್ಮಿಸಿದ ವಾಮಂಜೂರು ಕಂಬಳ,

ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕಡಿಮೆ ಸಮಯದಲ್ಲಿ ಮುಗಿಯುವ ಮೂಲಕ ದಾಖಲೆ ನಿರ್ಮಿಸಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಮುಕ್ತಾಯವಾಗಿದೆ. ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ ಬಾರಿಯೂ 23 ಗಂಟೆಯೊಳಗೆ ಸಂಪನ್ನವಾಗಿ ಮಾದರಿಯಾಗಿದೆ. ಕಂಬಳವನ್ನು ಸರಿಯಾದ ಸಮಯದಲ್ಲಿ ಮುಗಿಸಲು ಹೊಸ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ವಾಮಂಜೂರು ಕಂಬಳವು ಇತರ ಕೂಟಗಳಿಗೆ ಮಾದರಿಯಾಗಿದೆ. ಕನೆಹಲಗೆ ವಿಭಾಗದಲ್ಲಿ ಆರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 23 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 83 ಜೊತೆ ಕೋಣಗಳು ಭಾಗವಹಿಸಿದ್ದವು.