ಮಂಗಳೂರು: ಮದುವೆ ವೇಳೆ ಪೊಲೀಸರೊಂದಿಗೆ ಮದುಮಗನ ಮಾಜಿ ಪ್ರೇಯಸಿ ಎಂಟ್ರಿ – ಹೈಡ್ರಾಮಕ್ಕೆ ಸಾಕ್ಷಿಯಾದ ಮದುವೆ ಮನೆ,

Ullala Police Come to Wedding,

ಮಂಗಳೂರು: ಮದುವೆ ವೇಳೆ ಪೊಲೀಸರೊಂದಿಗೆ ಮದುಮಗನ ಮಾಜಿ ಪ್ರೇಯಸಿ ಎಂಟ್ರಿ – ಹೈಡ್ರಾಮಕ್ಕೆ ಸಾಕ್ಷಿಯಾದ ಮದುವೆ ಮನೆ,
1 / 1

1. ಮಂಗಳೂರು: ಮದುವೆ ವೇಳೆ ಪೊಲೀಸರೊಂದಿಗೆ ಮದುಮಗನ ಮಾಜಿ ಪ್ರೇಯಸಿ ಎಂಟ್ರಿ – ಹೈಡ್ರಾಮಕ್ಕೆ ಸಾಕ್ಷಿಯಾದ ಮದುವೆ ಮನೆ,

ಮದುವೆ ನಡೆಯುತ್ತಿದ್ದ ವೇಳೆ ಏಕಾಏಕಿ ಕಲ್ಯಾಣ ಮಂಟಪಕ್ಕೆ ಬಂದ ಯುವತಿಯೊಬ್ಬಳು ವರ ತನಗೆ ಮದುವೆಯಾಗುವುದಾಗಿ ಮೋಸ ಮಾಡಿದ್ದಾನೆ ಎಂದು ಜಗಳವಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ  ನಡೆದಿದೆ.ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಎಂಬಾತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಅಕ್ಷಯ್‌ಗೆ ಕರ್ನಾಟಕ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದ ಬೆನ್ನಲ್ಲೇ ಉಳ್ಳಾಲ ಪೊಲೀಸರೊಂದಿಗೆ ಹಾಲ್‌ಗೆ ಆಗಮಿಸಿದ ಯುವತಿ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ. ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.ಈ ಮಧ್ಯೆ, ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ ಎಂದು ತಿಳಿದು ಬಂದಿದೆ.