ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ರಿಕ್ಷಾ ಚಾಲಕ ಅರೆಸ್ಟ್,

Manglore Ullala, Auto Driver Arrested,

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ರಿಕ್ಷಾ ಚಾಲಕ ಅರೆಸ್ಟ್,
1 / 1

1. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ರಿಕ್ಷಾ ಚಾಲಕ ಅರೆಸ್ಟ್,

ಚಿಕ್ಕಮಗಳೂರು ಜಿಲ್ಲೆಯ ಪರಿಶಿಷ್ಟ ಜಾತಿಯ 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ , ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರಾಮದ ಮೊಹಮ್ಮದ್ ರಝೀನ್ (25) ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿದ್ದ ಆರೋಪಿ ಮೊಹಮ್ಮದ್ ರಝೀನ್ ನಾಲ್ಕು ತಿಂಗಳ ಹಿಂದೆ ನಗರದ ಪಂಪ್‌ವೆಲ್‌ಗೆ ಆಕೆಯನ್ನು ಬಸ್‌ನಲ್ಲಿ ಕರೆದುಕೊಂಡು ಬಂದಿದ್ದ. ನಂತರ ಆತನ ಆಟೊರಿಕ್ಷಾದಲ್ಲಿ ಆಕೆಯನ್ನು ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ಒತ್ತಾಯಪೂರ್ವಕವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ದೂರು ದಾಖಲಾಗಿದೆ.