ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು;

Hospital,Treatment,C M

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು;
1 / 1

1. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು;

ಮೊಣಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಕಳೆದ ಹಲವು ದಿನಗಳಿಂದ ಮೊಣಕಾಲಿನ  ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ವೈದ್ಯರು ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಿ  ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.  ಸದ್ಯ ಬಸವರಾಜ ಬೊಮ್ಮಾಯಿ ಅವರು ಆರೋಗ್ಯವಾಗಿದ್ದಾರೆ.